ಸಮರಸ ಚಿತ್ರಸುದ್ದಿ: ಬದಿಯಡ್ಕ: ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸಿದ ನೃತ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಕು.ಅಂಕಿತ ಎನ್. ಕೊಳಂಬೆ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿರುತ್ತಾರೆ. ಮಂಗಳೂರಿನ ಪ್ರಸಿದ್ಧ ಸನಾತನ ನಾಟ್ಯವಿದ್ಯಾಲಯ ಇಲ್ಲಿನ ವಿದ್ಯಾರ್ಥಿನಿ, ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿಶೇಖರ್ ಹಾಗೂ ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯೆಯಾಗಿದ್ದಾರೆ. ಪ್ರಸ್ತುತ ಮಂಗಳೂರು ಯೇನೆಪೋಯ ಕಾಲೇಜಿನಲ್ಲಿ ಮೆಡಿಕಲ್ ಮೈಕ್ರೋಬಯೋಲಜಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದಾರೆ. ಬದಿಯಡ್ಕ ಸಮೀಪ ಬೀಜಂತಡ್ಕದಲ್ಲಿ ವಾಸಿಸುತ್ತಿರುವ ನಿವೃತ್ತ ಪ್ರಬಂಧಕ ಕೆ.ಎನ್.ಕೊಳಂಬೆ ಮತ್ತು ವಿದ್ಯಾ ದಂಪತಿಗಳ ಪುತ್ರಿ.