ನವದೆಹಲಿ: ಹಿಜಾಬ್ ತೀರ್ಪು ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಅಥವಾ ತಮ್ಮ ರಾಜ್ಯಕ್ಕೆ ಪ್ರಕರಣ ವರ್ಗಾಯಿಸುವಂತೆ ಚೆನ್ನೈ ನಿವಾಸಿ, ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಸದಸ್ಯ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ನೀಡಿದೆ.