ಪಾಲಕ್ಕಾಡ್ ಹತ್ಯೆಗೆ ಸಂಬಂಧಿಸಿದಂತೆ ದ್ವೇಷದ ಸಂದೇಶ ಹರಡಿದ ಯುವಕನನ್ನು ಬಂಧಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಪ್ರಚಾರವನ್ನು ಹರಡಿದ ಮಲಪ್ಪುರಂ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಪಾಂಡಿಕ್ಕಾಡ್ ಕುಟ್ಟಿಪುಲ್ಲಿ ಮೂಲದ ಸಲೀಂ ಬಂಧಿತ ಆರೋಪಿ. 19ರಂದು ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಅಭಿಯಾನ ಆರಂಭಿಸಿದ್ದ.
ರಾಜ್ಯದಲ್ಲಿ ಅಲ್ಲಲ್ಲಿ ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಈ ಹಿಂದೆ ಎಚ್ಚರಿಕೆ ನೀಡಿದ್ದರು.