ಕೊಲ್ಲಂ: ಅಪರಿಚಿತ ವ್ಯಕ್ತಿಯೊಬ್ಬ ರೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಲಬಾರ್ ಎಕ್ಸ್ ಪ್ರೆಸ್ ನ ಬೋಗಿಯಲ್ಲಿ ಈ ಘಟನೆ ನಡೆದಿದೆ. ರೈಲು ಕೊಲ್ಲಂ ನಿಲ್ದಾಣದಲ್ಲಿ ನಿಂತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಮೃತರ ಗುರುತು ಪತ್ತೆಯಾಗಿಲ್ಲ.
ಮಲಬಾರ್ ಎಕ್ಸ್ ಪ್ರೆಸ್ ನ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ರೈಲ್ವೆ ಪೊಲೀಸರು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ರೈಲು ವಿಳಂಬವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.