ಶೋಪಿಯಾನ್: ಅಂಗಡಿಯಲ್ಲಿ ವ್ಯಾಪಾರಿಯಾಗಿದ್ದ ಕಾಶ್ಮೀರಿ ಪಂಡಿತನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಶೋಪಿಯಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಚೊಟಿಗಮ್ ಗ್ರಾಮದ ಬಾಲ್ ಕೃಷ್ಣನ್ ಕಾಲು, ಕೈಗಳಿಗೆ ತೀವ್ರವಾದ ಗಾಯಗಳಾಗಿವೆ.
ತಕ್ಷಣವೇ ಆತನನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೇನಾ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.