ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು ಮುಂದುವರೆದಿರುವಂತೆಯೇ ಸೋಮವಾರ ಭಾರತ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ವರ್ಚುವಲ್ ಸಭೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಂದರೆ ಏಪ್ರಿಲ್ 11ರಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಡನೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಭಾನುವಾರ ಮಾಹಿತಿ ನೀಡಿದೆ.
ಸಭೆ ವೇಳೆ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಹಕಾರ ಪರಿಶೀಲನೆ, ದಕ್ಷಿಣ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ಹಾಗೂ ಇಂಡೋ-ಪೆಸಿಫಿಕ್ ಮತ್ತು ಪರಸ್ಪರ ಆಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಲಿದ್ದಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ಸಹಭಾಗಿತ್ವವನ್ನು ಮುಂದುವರಿಸಲು ಎರಡೂ ರಾಷ್ಟ್ರಗಳಿಗೆ ಅನುವು ಮಾಡಿಕೊಡುತ್ತದೆ’ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.
"ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುತ್ತಾರೆ. ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ವರ್ಚುವಲ್ ಸಭೆಯು ದ್ವಿಪಕ್ಷೀಯ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯೊಂದಿಗೆ ತಮ್ಮ ನಿಯಮಿತ ಮತ್ತು ಉನ್ನತ ಮಟ್ಟದ ಕಾರ್ಯತತ್ವವನ್ನು ಮುಂದುವರಿಸಲು ಎರಡೂ ಕಡೆಯವರಿಗೆ ಅನುವು ಮಾಡಿಕೊಡುತ್ತದೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

ಇನ್ನು ಇದೇ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನವು, 'ನಮ್ಮ ಸರ್ಕಾರಗಳು, ಆರ್ಥಿಕತೆಗಳು ಮತ್ತು ನಮ್ಮ ಜನರ ನಡುವಿನ ಸಂಬಂಧಗಳನ್ನು ಇನ್ನಷ್ಟು ಗಾಢಗೊಳಿಸಲು" ಇಬ್ಬರು ನಾಯಕರು ವಾಸ್ತವಿಕವಾಗಿ ಭೇಟಿಯಾಗಲಿದ್ದಾರೆ ಎಂದು ಹೇಳಿದೆ.