ರಾಷ್ಟ್ರರಾಜಧಾನಿಯ ಉಪಹಾರ್ ಚಿತ್ರಮಂದಿರದಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ರಾಷ್ಟ್ರರಾಜಧಾನಿಯ ಉಪಹಾರ್ ಚಿತ್ರಮಂದಿರದಲ್ಲಿ ಇಂದು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
1997ರಲ್ಲಿ ಉಪಹಾರ್ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು.
ಮುಚ್ಚಿದ್ದ ಸಿನಿಮಾ ಹಾಲ್‌ನಲ್ಲಿ ಕಸದ ಜೊತೆಗೆ ಸೀಟುಗಳು ಹಾಗೂ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಥಿಯೇಟರ್‌ನ ಬಾಲ್ಕನಿ ಹಾಗೂ ಮಹಡಿ ಬೆಂಕಿಯಿಂದ ಹಾನಿಗೊಳಗಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವಾ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಬೆಳಗಿನ ಜಾವ 4:46ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, 7:20ರ ಸುಮಾರಿಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು. ಘಟನೆಯಿಂದ ಯಾರಿಗೂ ಸಾವು-ನೋವಾಗಿರುವ ಕುರಿತು ವರದಿಯಾಗಿಲ್ಲ.