ನವದೆಹಲಿ: 'ಮಹಾ ವಿಕಾಸ್ ಅಘಾಡಿ' ನಾಯಕರ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಕೇಂದ್ರದ ತನಿಖಾ ಸಂಸ್ಥೆಗಳು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ಮೋದಿಯನ್ನು ಬುಧವಾರ ಭೇಟಿ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ 'ಪಿಟಿಐ' ವರದಿ ಮಾಡಿದೆ.

ಸಂಸತ್ ಭವನದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಮೋದಿಯವರನ್ನು ಭೇಟಿಯಾದ ಪವಾರ್ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಸೇನಾ ನಾಯಕ ಸಂಜಯ್ ರಾವುತ್ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ಮಂಗಳವಾರ 'ಅಕ್ರಮ ಹಣ ವರ್ಗಾವಣೆ ತಡೆ' ಕಾನೂನಿನ ಅಡಿಯಲ್ಲಿ ಜಪ್ತಿ ಮಾಡಿದೆ.