ಕಾಸರಗೋಡು: ಕೇರಳದಲ್ಲಿ ಸಂಪೂರ್ಣ ಸಾಕ್ಷರತೆಯ ಘೋಷಣೆಯ ದಿನವಾದ ಏಪ್ರಿಲ್ 18ನ್ನು ಜಿಲ್ಲೆಯಲ್ಲಿ ಸಾಕ್ಷರತಾ ಮಿಷನ್ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಜಿಲ್ಲಾ ಸಾಕ್ಷರತಾ ಮಿಷನ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಹಯೋಗದಲ್ಲಿ ಜಿಲ್ಲಾದ್ಯಂತ ವಾರ್ಷಿಕೋತ್ಸವ ಆಚರಿಸಲಾಗುವುದು. ಎಪ್ರಿಲ್ 18 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಯೋಜನಾ ಸಭಾಂಗಣದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎಸ್.ಎನ್.ಸರಿತಾ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ ರಣವೀರ್ ಚಂದ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಈ ಸಂದರ್ಭ ಜಿಲ್ಲೆಯ ಅತ್ಯಂತ ಹಿರಿಯ ಸಾಕ್ಷರತಾ ಕಲಿಕೆದಾರರನ್ನು ಗೌರವಿಸಿ, ಪ್ರಮಾಣ ಪತ್ರ ನೀಡಲಾಗುವುದು. ಸಮಾರಂಭದಲ್ಲಿ 1990-91ರ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ ಸಾಕ್ಷರತಾ ಆಂದೋಲನದ ಚುಕ್ಕಾಣಿ ಹಿಡಿದ ಮಾಜಿ ಸಾಕ್ಷರತಾ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.