ಕೊಲ್ಲಂ: ಎಸ್‍ಡಿಪಿಐ ದಾಳಿಯಲ್ಲಿ ಬಿಜೆಪಿ ಕಾರ್ಯಕರ್ತ ಗಾಯಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಕೊಲ್ಲಂ ಮೂಲದ ಸುಜಿತ್ ಪ್ರಭಾಕರನ್ ಗಾಯಗೊಂಡಿದ್ದಾರೆ. ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಪ್ರತಿಕ್ರಿಯೆಯಿಂದ ಪ್ರೇರಣೆಗೊಂಡು ಹಲ್ಲೆ ನಡೆದಿದೆ ಎಂದು ವರದಿಯಾಗಿದೆ.
ಪಾಲಕ್ಕಾಡ್ ನಲ್ಲಿ ಕೆಲವು ದಿನಗಳ ಹಿಂದೆ ಪಟ್ಟಪ್ಪಕಲ್‍ನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಶ್ರೀನಿವಾಸನ್ ಅವರನ್ನು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ು ಕಡಿದು ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಮಂಗಳವಾರ ಮತ್ತೆ ಮೂವರನ್ನು ಬಂಧಿಸಿದ್ದರು.
ಶ್ರೀನಿವಾಸನ್ ಅಂಗಡಿಗೆ ನುಗ್ಗಿದ ಆರೋಪಿಗಳು ಹಾಗೂ ಕೊಲೆ ನಡೆಸಿದ ತಂಡದಲ್ಲಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಹೆಸರನ್ನು ಪೋಲೀಸರು ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಶ್ರೀನಿವಾಸ್ ಹತ್ಯೆಗೆ ಸಂಬಂಧಿಸಿದಂತೆ ಪಾಲಕ್ಕಾಡ್‍ನಲ್ಲಿರುವ ಎಸ್‍ಡಿಪಿಐ ಕಚೇರಿಗಳ ಮೇಲೆ ಪೋಲೀಸರು ದಾಳಿ ನಡೆಸಿದ್ದರು. ತ್ರಿದಳ ಮತ್ತು ಪಟ್ಟಾಂಬಿಯಲ್ಲಿ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಮನೆಗಳ ಮೇಲೆ ಪೋಲೀಸರು ದಾಳಿ ನಡೆಸಿದ್ದಾರೆ.