ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾ ಖಾನ್ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪಿಟಿಐ ಕೋರ್ ಕಮಿಟಿಯ ಸಮಾಲೋಚನೆ ಮತ್ತು ಅನುಮೋದನೆಯ ನಂತರ ಖಾನ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಪಿಟಿಐ ನಾಯಕ ಮತ್ತು ನಿರ್ಗಮಿತ ಮಾಹಿತಿ ಸಚಿವ ಫವಾದ್ ಚೌಧರಿ ಅವರು ಟ್ವಿಟರ್‌ನಲ್ಲಿ ಈ ಘೋಷಣೆ ಮಾಡಿದ್ದಾರೆ. ಹಿಂದಿನ ದಿನ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರು ಹಂಗಾಮಿ ಪ್ರಧಾನಿ ನೇಮಕಗೊಳ್ಳುವವರೆಗೆ ಖಾನ್ ಪ್ರಧಾನಿಯಾಗಿ ಮುಂದುವರಿಯುತ್ತಾರೆ ಎಂದು ಅಧಿಸೂಚನೆಯನ್ನು ಹೊರಡಿಸಿದ್ದರು. ಅದರಂತೆ ಸದ್ಯ ಮಾಜಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಲಾಗಿದೆ.