ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲ ಭಜನಾ ಸಂಕೀರ್ತನೋತ್ಸವ ಸಮಾರೋಪ ಸಮಾರಂಭ ಇಂದು (ಎ.22 ರಂದು) ಸಂಜೆ 4 ಗಂಟೆಗೆ ನಡೆಯಲಿದೆ.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ಮತ್ತು ಕೃತಜ್ಞತಾ ಪತ್ರ ಪ್ರದಾನ ಮಾಡುವರು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ಮತ್ತು ಸಮಾರೋಪ ನುಡಿಯನ್ನಾಡುವರು.
ನವೀಕರಣ ಸಮಿತಿ ಅಧ್ಯಕ್ಷ ಯು.ಟಿ.ಆಳ್ವ ಅಧ್ಯಕ್ಷತೆ ವಹಿಸುವರು. ದೇವಸ್ಥಾನದ ತಂತ್ರಿವರ್ಯರಾದ ಬ್ರಹ್ಮಶ್ರೀ ಶಿವಪ್ರಸಾದ್ ತಂತ್ರಿ ದೇರೇಬೈಲು, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಗೌರವ ಉಪಸ್ಥಿತರಿರುವರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಗೌರವ ಉಪಸ್ಥಿತರಿರುವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಸಂದೇಶ ನೀಡುವರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಂ.ಬಾಬು, ನವೀಕರಣ ಸಮಿತಿ ಉಪಾಧ್ಯಕ್ಷ ಡಾ.ಬಿ.ಎಸ್.ರಾವ್, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ ಉಪಸ್ಥಿತರಿರುವರು.