ನವದೆಹಲಿ: ಭಾರತೀಯ ಹವಾಮಾನ ಇಲಾಖೆಯ ಟ್ವಿಟರ್ ಖಾತೆಯನ್ನು ಹ್ಯಾಕರ್ ಗಳು ಶನಿವಾರ ಸಂಜೆ ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಲಿ ಹ್ಯಾಕಿಂಗ್ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಆದರೆ ಪ್ರಸ್ತುತ ಖಾತೆಯ ಪುನಃ ಸ್ಥಾಪನೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಟ್ವಿಟರ್ ಹ್ಯಾಂಡಲ್ ಅನ್ನು ಹ್ಯಾಕ್ ಮಾಡಲಾಗಿದೆ ಮತ್ತು ಅದನ್ನು ಮರುಸ್ಥಾಪಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.
ಭಾರತದ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ತೀವ್ರವಾದ ಬೇಸಿಗೆ ಬೇಗೆಯಿಂದಾಗಿ Iಒಆ ಖಾತೆ (ಹವಾಮಾನ ಇಲಾಖೆ)ಗೆ ಸಾಕಷ್ಟು ಟ್ವಿಟರ್ ಖಾತೆಗೆ ವೀಕ್ಷಕರ ಸಂಖ್ಯೆ ಅತ್ಯಧಿಕವಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.