ತಿರುವನಂತಪುರಂ: ಪಾಲಕ್ಕಾಡ್ ನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಪೋಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ದ್ವೇಷ ಮತ್ತು ಪೈಪೆÇೀಟಿಗೆ ಪ್ರಚೋದನೆ ನೀಡುವ ಹಾಗೂ ಸಮುದಾಯದ ಐಕ್ಯತೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸರು ಎಚ್ಚರಿಕೆ ನೀಡಿದ್ದಾರೆ.
“ಪಾಲಕ್ಕಾಡ್‍ನಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸಮಾಜದಲ್ಲಿ ದ್ವೇಷ ಮತ್ತು ವೈಷಮ್ಯವನ್ನು ಹುಟ್ಟುಹಾಕುವ ಮತ್ತು ಕೋಮು ಐಕ್ಯತೆಗೆ ಧಕ್ಕೆ ತರುವ ಉದ್ದೇಶದಿಂದ ಕೆಲವು ಸಮಾಜ ವಿರೋಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿರುವುದು ಗಮನಕ್ಕೆ ಬಂದಿದೆ. ಗುಂಪುಗಳು ಮತ್ತು ಗ್ರೂಪ್ ಅಡ್ಮಿನ್‍ಗಳನ್ನು ಪೋಲೀಸ್ ಕಣ್ಗಾವಲಿನಲ್ಲಿ ತೆಗೆದುಕೊಳ್ಳಲಾಗುವುದು ಮತ್ತು ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೆÇಲೀಸರು ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಪಾಲಕ್ಕಾಡ್‍ನಲ್ಲಿ ಆರ್‍ಎಸ್‍ಎಸ್-ಎಸ್‍ಡಿಪಿಐ ಕಾರ್ಯಕರ್ತರ ಹತ್ಯೆ ಹಿನ್ನೆಲೆಯಲ್ಲಿ ಪೋಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗುಂಪುಗಳನ್ನು ಕೇಂದ್ರವಾಗಿಟ್ಟುಕೊಂಡು ಪ್ರಚೋದನಕಾರಿ ಸಂದೇಶಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಪೆÇಲೀಸರು ಎಚ್ಚರಿಕೆ ನೀಡಿದ್ದಾರೆ. ಕಠಿಣ ಕ್ರಮ ಕೈಗೊಳ್ಳುವುದಾಗಿ ಪೆÇಲೀಸರು ಎಚ್ಚರಿಕೆ ನೀಡಿದ್ದಾರೆ.
ಪಾಲಕ್ಕಾಡ್‍ನ ಎಲಪುಲ್ಲಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತ ಜುಬೈರ್‍ನನ್ನು ಕೊಂದ ನಂತರ ಶುಕ್ರವಾರದಂದು ಜನರ ಗುಂಪೆÇಂದು ಆರ್‍ಎಸ್‍ಎಸ್‍ನ ಕಾರ್ಯಕರ್ತ ಶ್ರೀನಿವಾಸನ್ ಅವರನ್ನು ಹತ್ಯೆಗೈದಿತ್ತು. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶ್ರೀನಿವಾಸನ್ ಅವರ ಅಂಗಡಿಗೆ ಆಗಮಿಸಿದ ಗುಂಪು ಕಡಿದು ಹಾಕಿತ್ತು. ಶ್ರೀನಿವಾಸನ್ ಹತ್ಯೆಗೂ ಎಸ್ ಡಿಪಿಐ ಕಾರ್ಯಕರ್ತನ ಹತ್ಯೆಗೂ ಸಂಬಂಧವಿಲ್ಲ ಎಂದು ಪೋಲೀಸರು ತಿಳಿಸಿದ್ದಾರೆ.