ನವದೆಹಲಿ: ಕೋವಿಡ್ ಲಸಿಕೆ 'ಕೋವೊವ್ಯಾಕ್ಸ್' ಅನ್ನು 12 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಿಗೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವ ಸಲುವಾಗಿ ಲಸಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ಕೋವಿಡ್-19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಮುಂದಾಗಿದೆ.

ಈ ಸಂಬಂಧ, ಎನ್‌ಟಿಎಜಿಐ ಸದಸ್ಯರನ್ನು ಒಳಗೊಂಡ ಸಮಿತಿಯು ಏಪ್ರಿಲ್ 1ರಂದು ಸಭೆ ನಡೆಸಲಿದೆ. ಕೋವೊವ್ಯಾಕ್ಸ್ ಅನ್ನು ಕೋವಿಡ್-19 ಲಸಿಕಾ ಕಾರ್ಯಕ್ರಮದಲ್ಲಿ ಸೇರ್ಪಡೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ಸಮಿತಿ ತನ್ನ ನಿರ್ಧಾರ ತಿಳಿಸಲಿದೆ ಎಂದು ಮೂಲಗಳು ಹೇಳಿವೆ.
ಪುಣೆ ಮೂಲದ ಸೀರಂ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಈ ಲಸಿಕೆಯನ್ನು ಉತ್ಪಾದಿಸುತ್ತಿದೆ. ಈ ಲಸಿಕೆಯನ್ನು ವಯಸ್ಕರಿಗೆ ತುರ್ತು ಸಂದರ್ಭದಲ್ಲಿ ನೀಡಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಕಳೆದ ವರ್ಷ ಡಿಸೆಂಬರ್ 28ರಂದು ಅನುಮತಿ ನೀಡಿದ್ದರು. ನಿರ್ದಿಷ್ಟ ಸನ್ನಿವೇಶಗಳಲ್ಲಿ 12ರಿಂದ 17 ವರ್ಷ ವಯೋಮಾನದವರಿಗೆ ನೀಡುವ ಸಂಬಂಧ ಮಾರ್ಚ್ 9ರಂದು ಅನುಮತಿ ನೀಡಲಾಗಿತ್ತು.