ಸಾಗರೋತ್ತರ ಮತದಾರರಿಗೆ ಎಲೆಕ್ಟ್ರಾನಿಕ್ ಟ್ರಾನ್ಸ್‌ಮಿಟೆಡ್ ಪೋಸ್ಟಲ್ ಬ್ಯಾಲೆಟ್ ಸಿಸ್ಟಮ್ (ಇಟಿಪಿಬಿಎಸ್) ಸೌಲಭ್ಯವನ್ನು ಪರಿಚಯಿಸಲು ಭಾರತೀಯ ಚುನಾವಣಾ ಆಯೋಗವು ಪರಿಶೀಲಿಸುತ್ತಿದೆ ಎಂದು ಚುನಾವಣಾ ಆಯೋಗವು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
ಸಾಗರೋತ್ತರ ಮತದಾರರಿಗೆ ಎಲೆಕ್ಟ್ರಾನಿಕ್ ಟ್ರಾನ್ಸ್‌ಮಿಟೆಡ್ ಪೋಸ್ಟಲ್ ಬ್ಯಾಲೆಟ್ ಸಿಸ್ಟಮ್ (ಇಟಿಪಿಬಿಎಸ್) ಸೌಲಭ್ಯವನ್ನು ಪರಿಚಯಿಸಲು ಭಾರತೀಯ ಚುನಾವಣಾ ಆಯೋಗವು ಪರಿಶೀಲಿಸುತ್ತಿದೆ ಎಂದು ಚುನಾವಣಾ ಆಯೋಗವು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ನೇತೃತ್ವದ ನಿಯೋಗವು ಎಪ್ರಿಲ್ 9-19 ರವರೆಗೆ ದಕ್ಷಿಣ ಆಫ್ರಿಕಾ ಹಾಗೂ ಮಾರಿಷಸ್‌ಗೆ ಭೇಟಿ ನೀಡಿತು. ಅನೇಕ ಸಭೆಗಳನ್ನು ನಡೆಸಿತು. ಇದರಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾದ ಚುನಾವಣೆಗಳನ್ನು ಹೇಗೆ ನಡೆಸಬೇಕು ಎಂಬುದರ ಕುರಿತು ಅಭಿಪ್ರಾಯ ಕೇಳಲಾಯಿತು.
"ಈ ಭೇಟಿಯ ಸಮಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಮಾರಿಷಸ್‌ನ ಚುನಾವಣಾ ಆಯೋಗಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಾಯಿತು. ಜೊತೆಗೆ ಎರಡು ದೇಶಗಳಲ್ಲಿನ ಎನ್‌ಆರ್‌ಐ ಸಮುದಾಯದೊಂದಿಗೆ ಸಂವಾದ ನಡೆಸಲಾಯಿತು" ಎಂದು ಇಸಿಐ ಹೇಳಿಕೆ ತಿಳಿಸಿದೆ.
ಪ್ರಸ್ತುತ ಸಂಖ್ಯೆಗಳು 'ಕಡಿಮೆ' ಆಗಿರುವುದರಿಂದ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮತದಾರರನ್ನು ಒತ್ತಾಯಿಸಿದರು.