HEALTH TIPS

ಸಿಎಂ ಅಧಿಕೃತ ನಿವಾಸದ ಭದ್ರತಾ ಸಿಬ್ಬಂದಿ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

            ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯ್​ ವಿಜಯನ್​ ಅವರ ಅಧಿಕೃತ ನಿವಾಸದ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್​ ಸಿಬ್ಬಂದಿಯೊಬ್ಬರ ಮೃತದೇಹ ರೈಲು ಹಳಿಯ ಮೇಲೆ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

           ಮೃತ ಸಿಬ್ಬಂದಿಯನ್ನು ಅನೀಶ್​ ಕ್ಸೇವಿಯರ್ (32) ಎಂದು ಗುರುತಿಸಲಾಗಿದೆ.

ಭಾನುವಾರ 1.30ರ ಸುಮಾರಿಗೆ ಇಡಿಚಕ್ಕಪ್ಲಾಮೂಡು ಬಳಿ ಇರುವ ರೈಲ್ವೇ ಮೇಲ್ಸೇತುವೆಯಲ್ಲಿ ಮೃತದೇಹ ಪತ್ತೆಯಾಗಿದೆ.

              ಪಾರಸಾಲ ಪೊಲೀಸ್​ ಠಾಣೆಯಲ್ಲಿನ ಮಾನಸಿಕ ಕಿರುಕುಳದಿಂದ ಅನೀಶ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅವರ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ತನ್ನ ನೆರೆಹೊರೆಯ ಮಹಿಳೆಯೊಬ್ಬರು ದಾಖಲಿಸಿದ ದೂರಿನ ಮೇರೆಗೆ ಅನೀಶ್​ ಪೊಲೀಸ್ ಠಾಣೆಗೆ ಹೋಗಿದ್ದರು. ಇದಕ್ಕೂ ಮುನ್ನ ಅಣ್ಣನ ಮದುವೆ ರದ್ದಾದ ಹಿನ್ನೆಲೆಯಲ್ಲಿ ಮಹಿಳೆಯೊಂದಿಗೆ ಕೆಲಕಾಲ ಜಗಳವಾಡಿದ್ದರು. ಅನೀಶ್, ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳು.        ಪೊಲೀಸ್​ ಠಾಣೆಗೆ ಮಗನನ್ನು ಕರೆಸಿ ಕಿರುಕುಳ ನೀಡಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.

ಇದೇ ಸಂದರ್ಭದಲ್ಲಿ ಮಹಿಳೆಯು ತನಗೆ ಮಾನಸಿಕವಾಗಿ ಹಿಂಸೆ ನೀಡಿದ್ದಾಳೆ ಎಂದು ಆರೋಪಿಸಿರುವ ಡೆತ್​ನೋಟ್​ ಅನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆದರೆ, ಈವರೆಗೂ ಅನೀಶ್​ ಮಹಿಳೆಯ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ ಎಂದು ಪಾರಸಾಲ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ದೂರು ನೀಡಿದರೆ, ಕೆಲಸ ಕಳೆದುಕೊಳ್ಳಬಹುದು ಎಂಬ ಭಯ ಅನೀಶ್‌ಗೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries