ಕಾಸರಗೋಡು: ರಾಯಿಟರ್ಸ್ ಉಪಸಂಪಾದಕಿ ಹಾಗೂ ಕಾಸರಗೋಡು ಸಾಮಾಜಿಕ ಕಾರ್ಯಕರ್ತ ನಾರಾಯಣನ್ ಪೆರಿಯ ಅವರ ಪುತ್ರಿ ಶೃತಿ ಸಾವಿನ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇರಳ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ಕಾಸರಗೋಡು ಘಟಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸಿದೆ.
ಈ ಬಗ್ಗೆ ತಿರುವನಂತಪುರದಲ್ಲಿ ಮುಖ್ಯಮಂತ್ರಿಗೆ ಕೆಯುಡಬ್ಲ್ಯೂಜೆ ಜಿಲ್ಲಾ ಸಮಿತಿ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ರಾಯಿಟರ್ಸ್‍ನಲ್ಲಿ ಉಪಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದ ಶ್ರುತಿ ಅವರು ನ.22ರಂದು ತಮ್ಮ ಫ್ಲಾಟ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬೆಂಗಳೂರು ಪೆÇಲೀಸರು ಶೃತಿ ಸಾವು ಆತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ವದಂತಿ ಕೊಠಡಿಯಲ್ಲಿ ಪತಿಯ ಕಿರುಕುಳದ ಬಗ್ಗೆ ಡೆತ್ ನೋಟ್ ಲಭಿಸಿರುವುದು ಸಂಶಯಕ್ಕೆ ಕಾರಣವಾಗಿದೆ.