ತಿರುವನಂತಪುರಂ: ಅನಂತಪುರಿ ಹಿಂದೂ ಮಹಾ ಸಮ್ಮೇಳನವನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಉದ್ಘಾಟಿಸಲಿದ್ದಾರೆ. ಏಪ್ರಿಲ್ 27 ರಂದು ದಕ್ಷಿಣ ಕೋಟೆಯ ಪ್ರಿಯದರ್ಶಿನಿ ಕ್ಯಾಂಪಸ್‍ನಲ್ಲಿ ಉದ್ಘಾಟನೆ ನಡೆಯಲಿದೆ. ಸ್ವಾಮಿ ಚಿದಾನಂದಪುರಿ ಸಮ್ಮೇಳನದಲ್ಲಿ ಪ್ರಧಾನ ಭಾಷಣ ಮಾಡಲಿದ್ದಾರೆ. ಕೇಂದ್ರ ಸಚಿವ ವಿ. ಮುರಳೀಧರನ್, ಕುಮ್ಮನಂ ರಾಜಶೇಖರನ್, ಜನಂ ಟಿವಿ ಸುದ್ದಿ ಸಂಪಾದಕ ಜಿ.ಕೆ.ಸುರೇಶ್ ಬಾಬು, ಪಿಸಿ ಜಾರ್ಜ್, ಕೆ. ಕುಂಞÂ್ಞ ಕಣ್ಣನ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸಮ್ಮೇಳನ ನಡೆದಿರಲಿಲ್ಲ. ಏಪ್ರಿಲ್ 27 ರಿಂದ ಮೇ 1 ರವರೆಗೆ ಐದು ದಿನಗಳ ಕಾಲ ಸಮ್ಮೇಳನ ನಡೆಯಲಿದೆ. ಮೇ 1ರಂದು ನಡೆಯುವ ಸಮಾರೋಪ ಸಮಾರಂಭವನ್ನು ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಉದ್ಘಾಟಿಸಲಿದ್ದಾರೆ. ಹಿಂದೂ ಐಕ್ಯವೇದಿ ರಾಜ್ಯ ಕಾರ್ಯಾಧ್ಯಕ್ಷ ವತ್ಸನ್ ತಿಲ್ಲಂಗೇರಿ ಆಶಯ ಭಾಷಣ ಮಾಡಲಿದ್ದಾರೆ.
ಸಮಾವೇಶದ ಅಂಗವಾಗಿ ಹಿಂದೂ ಯುವ ಸಮಾವೇಶವನ್ನೂ ಆಯೋಜಿಸಲಾಗಿದೆ. ಸಮ್ಮೇಳನವು ಏಪ್ರಿಲ್ 28 ರಿಂದ 1 ರವರೆಗೆ 16 ವಿಚಾರಗೋಷ್ಠಿಗಳನ್ನು ಒಳಗೊಂಡಿರುತ್ತದೆ. ಭಾರತದ ಒಳಗಿನ ಮತ್ತು ಹೊರಗಿನ ಅನೇಕ ಜನರು ಸೆಮಿನಾರ್‍ನಲ್ಲಿ ಪಾಲ್ಗೊಳ್ಳುತ್ತಾರೆ.