ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಮವಾರ ವಿಚಾರಣೆಗೆ ಒಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಗಾಗಿ ನವದೆಹಲಿಯಲ್ಲಿರುವ ಜಾರಿ ನಿರ್ದೇಶಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯಸಭೆಯ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜನ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ತನಿಖೆಯಲ್ಲಿ ಕೆಲವೊಂದು ವಿಷಯಗಳನ್ನು ತಿಳಿಯಲು ಇಡಿ ಬಯಸಿದ್ದು, ಹಣ ವರ್ಗಾವಣೆ ತಡೆ ಕಾಯ್ಡೆಯಡಿ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.