ಮಂಗಳೂರು: ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಎನ್ಐಟಿಕೆ ಬೀಚ್ ನಲ್ಲಿ ಮಂಗಳೂರಿನ ಶಕ್ತಿನಗರದ ನಿವಾಸಿಗಳಾದ 21 ವರ್ಷದ ವೈಷ್ಣವಿ ಮತ್ತು 17 ವರ್ಷದ ತ್ರಿಷಾ ಸಾವನ್ನಪ್ಪಿದ್ದಾರೆ. ಬೀಚ್ ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಮೂವರು ಕೊಚ್ಚಿ ಹೋಗಿದ್ದರು ಎಂದು ತಿಳಿದುಬಂದಿದೆ.
ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಮೂವರು ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಈಜುಗಾರರು, ಹೋಮ್ ಗಾರ್ಡ್ ಗಳು ಮೂವರನ್ನು ರಕ್ಷಿಸಿದ್ದರು. ಇನ್ನು ಮೂವರು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ.
ತೀವ್ರವಾಗಿ ಅಸ್ವಸ್ಥಗೊಂಡಿದ್ದ ವೆಂಕಟೇಶ್ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.