ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ ಅವರ ಒಕ್ಕೂಟ ವ್ಯವಸ್ಥೆ ಸಹಕಾರಿಯಾಗಿಲ್ಲ, ಅದು ದಬ್ಬಾಳಿಕೆಯಾಗಿದೆ ಎಂದಿದ್ದಾರೆ.
ಬಿಜೆಪಿಯೇತರ ಪಕ್ಷವಿರುವ ಆಡಳಿತದಲ್ಲಿರುವ ರಾಜ್ಯಗಳಲ್ಲಿ ರಾಷ್ಟ್ರದ ಹಿತಾಸಕ್ತಿಯಿಂದ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಡೀಸೆಲ್, ಪೆಟ್ರೋಲ್ ಮೇಲಿನ ವ್ಯಾಟ್ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ, ರಾಹುಲ್ ಗಾಂಧಿ ಈ ರೀತಿಯಾಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಎಲ್ಲಾ ತೈಲ ತೆರಿಗೆಗಳಲ್ಲಿ ಶೇಕಡಾ 68 ರಷ್ಟು ತೆಗೆದುಕೊಂಡಿದ್ದರೂ ತೈಲ ಬೆಲೆ ಹೆಚ್ಚಳಕ್ಕೆ ರಾಜ್ಯಗಳನ್ನು ದೂಷಿಸುವ ಮೂಲಕ ತಮ್ಮ ಹೊಣೆಗಾರಿಕೆಯಿಂದ ಪ್ರಧಾನ ಮಂತ್ರಿ ನುಣಿಚಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
High Fuel prices - blame states
— Rahul Gandhi (@RahulGandhi) April 28, 2022
Coal shortage - blame states
Oxygen shortage - blame states
68% of all fuel taxes are taken by the centre. Yet, the PM abdicates responsibility.
Modi’s Federalism is not cooperative. It’s coercive.
'' ತೈಲ ದರ ಹೆಚ್ಚಳ, ರಾಜ್ಯಗಳ ದೂಷಣೆ, ಕಲ್ಲಿದ್ದಲು ಕೊರತೆ- ರಾಜ್ಯಗಳು ದೂಷಣೆ, ಆಕ್ಸಿಜನ್ ಕೊರತೆ-ರಾಜ್ಯಗಳ ದೂಷಣೆ ಎಂದು ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿದ್ದಾರೆ. ಎಲ್ಲಾ ತೈಲ ತೆರಿಗೆಗಳಲ್ಲಿ ಕೇಂದ್ರ ಸರ್ಕಾರ ಶೇ.68 ರಷ್ಟನ್ನು ತೆಗೆದುಕೊಂಡರೂ ಪ್ರಧಾನಮಂತ್ರಿ ಹೊಣೆಯನ್ನು ಹೊತ್ತುಕೊಳ್ಳುತ್ತಿಲ್ಲ. ಒಕ್ಕೂಟ ವ್ಯವಸ್ಥೆ ಸಹಕಾರಿಯಾಗಿಲ್ಲ, ಅದು ದಬ್ಬಾಳಿಕೆಯಾಗಿದೆ ಎಂದು ರಾಹುಲ್ ಗಾಂಧಿ ಟೀಕಾಪ್ರಹಾರ ನಡೆಸಿದ್ದಾರೆ.