ಮಂಜೇಶ್ವರ: ಕಡಂಬಾರು ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎಪ್ರಿಲ್ 4 ರಂದು ಮಧ್ಯಾಹ್ನ 2 ಗಂಟೆಗೆ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ 'ಶಿವಾನುಗ್ರಹ' ಎಂಬ ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳಿ ಮಾಧವ ಮಧೂರು ಭಾಗವಹಿಸಲಿದ್ದಾರೆ.