ನವದೆಹಲಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚುವಿಟಿ (ತುಟ್ಟಿಭತ್ಯೆ) ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ನವದೆಹಲಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚುವಿಟಿ (ತುಟ್ಟಿಭತ್ಯೆ) ಪಡೆಯಲು ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಐಸಿಡಿಎಸ್ ಯೋಜನೆಯಡಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಗರ್ಭಿಣಿಯರಿಗೆ ಮತ್ತು ಶಿಶುಗಳಿಗೆ ಪೌಷ್ಠಿಕಾಂಶ ಒದಗಿಸುವ ಹಾಗೂ ಸಮೀಕ್ಷೆಗಳನ್ನು ನಡೆಸುವ ಮತ್ತಿತರ ಕೆಲಸಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಕೇಂದ್ರ ಸರಕಾರದಿಂದ ಗೌರವಧನದ ಹೊರತಾಗಿ ರಾಜ್ಯ ಸರಕಾರಗಳಿಂದಲೂ ಸಂಭಾವನೆ ಪಡೆಯುತ್ತಾರೆ.
ಹೀಗಿರುವಾಗ ಗ್ರಾಚುವಿಟಿ ಪಾವತಿ ಕಾಯಿದೆ, 1972 ಅನ್ವಯ ಅವರು ಗ್ರಾಚುವಿಟಿಗೆ ಅರ್ಹರಾಗಿದ್ದಾರೆ ಎಂದು ಜಸ್ಟಿಸ್ ಅಜಯ್ ರಸ್ತೋಗಿ ಮತ್ತು ಅಭಯ್ ಎಸ್ ಓಕಾ ಅವರ ಪೀಠ ಹೇಳಿದೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚುವಿಟಿಗೆ ಅರ್ಹರಲ್ಲ ಎಂಬ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾರ್ಯಕರ್ತೆಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜತೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.