ನವದೆಹಲಿ: ಸಸ್ಯಾಹಾರಿ ಪ್ರಯಾಣಿಕರಿಗೆ ತಪ್ಪಾಗಿ ಮಾಂಸಾಹಾರದ ಊಟ ನೀಡಿದ ಕಾರಣಕ್ಕಾಗಿ ಏರ್ ಇಂಡಿಯಾ ಮಾರ್ಚ್ 25 ರ ಟೋಕಿಯೊ-ದೆಹಲಿ ವಿಮಾನದ ಇಬ್ಬರು ಕ್ಯಾಬಿನ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರು ಜೈನ ಸಸ್ಯಾಹಾರಿ ಊಟವನ್ನು ಆರ್ಡರ್ ಮಾಡಿದ್ದರು. ಆದರೆ ಅವರಿಗೆ ತಪ್ಪಾಗಿ ಮಾಂಸಹಾರದ ಊಟ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತನಗೆ ತಪ್ಪು ಊಟ ಬಡಿಸಲಾಗಿದೆ ಎಂದು ಪ್ರಯಾಣಿಕರ ಗಮನಕ್ಕೆ ಬಂದ ನಂತರ ಅವರು ಸಿಬ್ಬಂದಿಗೆ ದೂರು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನಯಾನ ಸಂಸ್ಥೆಯು ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದು, ಈ ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.