ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 10 ರಂದು 6 ಗಂಟೆಗಳ ಕಾಲ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 10 ರಂದು 6 ಗಂಟೆಗಳ ಕಾಲ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೇನು ಮುಂಗಾರು ಮಳೆ ಪ್ರಾರಂಭವಾಗಲಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನ ಹಾರಾಟಕ್ಕೆ ಯಾವುದೇ ಅಡೆತಡೆ ಉಂಟಾಗದಿರಲು ರನ್ವೇ ನಿರ್ವಹಣಾ ಕಾರ್ಯ ನಡೆಯುವುದರಿಂದ ಈ ನಿರ್ಧಾರ ಕೈಗೊಂಡಿದೆ.
ಹಾಗಾಗಿ ಮೇ 10 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಯಾವುದೇ ವಿಮಾನ ಹಾರಾಟ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಎರಡು ರನ್ ವೇಗಳ ನಿರ್ವಹಣಾ ಕಾರ್ಯ ಅಂದು ಸಂಜೆ 5 ಗಂಟೆಯೊಳಗೆ ಪೂರ್ಣಗೊಂಡ ನಂತರ ವಿಮಾನ ಹಾರಾಟ ಕಾರ್ಯಾರಂಭಿಸಲಿದೆ. ಯಾವುದೇ ಅನಾನುಕೂಲವನ್ನು ತಪ್ಪಿಸಲು ಪ್ರಯಾಣಿಕರು ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದೆ.