ಬದಿಯಡ್ಕ: ಕಿಳಿಂಗಾರು ಸಾಯಿರಾಂ ಟ್ರಸ್ಟ್ ಹಾಗೂ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜು ಹೋಸ್ಪಿಟಲ್ ದೇವಿನಗರ ತಲಪ್ಪಾಡಿ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮೇ.15ರಂದು ಕಿಳಿಂಗಾರು ಎಎಲ್‍ಪಿ ಶಾಲೆಯಲ್ಲಿ ಜರಗಲಿದೆ. ಬೆಳಗ್ಗೆ 10.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸುವರು. ಬದಿಯಡ್ಕ ಗ್ರಾಪಂ ಅಧ್ಯಕ್ಷೆ ಬಿ.ಶಾಂತಾ, ಉಪಾಧ್ಯಕ್ಷ ಎಂ.ಅಬ್ಬಾಸ್, ಸ್ಥಾಯಿಸಮಿತಿ ಅಧ್ಯಕ್ಷೆ ಸೌಮ್ಯಾ ಮಹೇಶ್, ಬ್ಲಾಕ್ ಪಂಚಾಯಿತಿ ಸದಸ್ಯೆ ಜಯಂತಿ, ಗ್ರಾಪಂ ಸದಸ್ಯೆ ಜಯಶ್ರೀ, ಮಾಜಿ ಗ್ರಾಪಂ ಅಧ್ಯಕ್ಷ ಮಾಹಿನ್ ಕೇಳೋಟ್, ನಿವೃತ್ತ ಮುಖ್ಯೋಪಾಧ್ಯಾಯ ಎನ್.ಸುಬ್ರಾಯ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀವಿದ್ಯಾ ಉಪಸ್ಥಿತರಿರುವರು. ಶಿಬಿರದಲ್ಲಿ ಉಚಿತವಾಗಿ ಔಷಧಿಯನ್ನೂ ನೀಡಲಾಗುವುದು. ಜೂನ್ ತಿಂಗಳಿನಿಂದ ಪ್ರತೀ ತಿಂಗಳ ಮೊದಲ ಭಾನುವಾರ 9ರಿಂದ 1ರ ತನಕ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ಔಷಧಿ ನೀಡಲಾಗುವುದು ಎಂದು ಸಾಯಿರಾಂ ಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.