HEALTH TIPS

ಕೋವಿಡ್-19: ಭಾರತದಲ್ಲಿಂದು 2,364 ಹೊಸ ಕೇಸ್ ಪತ್ತೆ, 10 ಮಂದಿ ಸಾವು

                ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,364 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

                ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,29,563ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,303ಕ್ಕೆ ಏರಿಕೆಯಾಗಿದೆ.

                 ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,419ಕ್ಕೆ ಇಳಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,582 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,89,841ಕ್ಕೆ ತಲುಪಿದೆ.

              ಭಾರತದಲ್ಲಿ 4,34,962 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84,49,26,602 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

               ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

              ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,91,79,96,905 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries