ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಇಳಿಕೆಯತ್ತ ಸಾಗುತ್ತಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 1,569 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,25,84,710ಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,400ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,467 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,84,,710ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 3,57,484 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 84 ಕೋಟಿಯ 44 ಲಕ್ಷ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 191.48 ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.