ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಯವರೆಗಿನ ಅಂಕಿಅಂಶದಲ್ಲಿ ಸ್ವಲ್ಪ ಕಡಿಮೆಯಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3, 207 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 29 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಭಾನುವಾರ ದೇಶದಲ್ಲಿ 40 ಮಂದಿ ಸೋಂಕಿಗೆ ಬಲಿಯಾಗಿದ್ದರು.
ಇದುವರೆಗೆ ಸೋಂಕಿನಿಂದ 4 ಕೋಟಿಯ 25 ಲಕ್ಷದ 60 ಸಾವಿರದ 905 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರದ 403ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,410 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇಕಡಾ 0.05ರಷ್ಟಿದೆ. ಗುಣಮುಖ ಹೊಂದುತ್ತಿರುವವರ ಪ್ರಮಾಣ ಶೇಕಡಾ 98.74ರಷ್ಟಿದೆ.
ಭಾರತದಲ್ಲಿ ಒಂದೇ 3,36,776 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 84.10 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರಗೆ 190.34 ಕೋಟಿ ಡೋಸ್ ಗಳನ್ನು ದೇಶದ ನಾಗರಿಕರಿಗೆ ನೀಡಲಾಗಿದೆ.