ನವದೆಹಲಿ: ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಲೋಕ ನಾಯಕ ಆಸ್ಪತ್ರೆ(ಎಲ್‌ಎನ್‌ಜೆಪಿ)ಯಲ್ಲಿ ಶೇ 80 ರಷ್ಟು ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟಿರುವ ಎರಡು ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಿಸಿದೆ.

ಎರಡು ಸಾವಿರ ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಎಲ್‌ಎನ್‌ಜೆಪಿ ಆಸ್ಪತ್ರೆಯು ಕೋವಿಡ್ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದೆ. ಇತ್ತೀಚೆಗೆ ಇಲ್ಲಿ 450ರಷ್ಟು ಹಾಸಿಗೆಗಳನ್ನು ಹೆಚ್ಚಿಸಲಾಗಿದೆ. ಐಸಿಯು ಹಾಸಿಗೆಗಳನ್ನು 100ರಿಂದ 178ಕ್ಕೆ ಏರಿಕೆ ಮಾಡಲಾಗಿದೆ.
ಗುರು ತೇಜ್ ಬಹಾದ್ದೂರ್ ಆಸ್ಪತ್ರೆಯಲ್ಲಿ (ಜಿಟಿಬಿ) ಹಾಸಿಗೆ ಸಾಮರ್ಥ್ಯವನ್ನು 400ಕ್ಕೆ ಹೆಚ್ಚಿಸಲಾಗಿದ್ದು, ಹೊಸದಾಗಿ 50 ಐಸಿಯು ಹಾಸಿಗೆಗಳನ್ನು ಸೇರ್ಪಡೆ ಮಾಡಲಾಗಿದೆ. ಎರಡೂ ಆಸ್ಪತ್ರೆಗಳಲ್ಲಿ ಹೊಸದಾಗಿ 350-850 ಸಾಮಾನ್ಯ ಹಾಸಿಗೆಗಳು ಹಾಗೂ ಐಸಿಯು ಹಾಸಿಗೆಗಳನ್ನು 100ರಿಂದ 228ಕ್ಕೆ ಹೆಚ್ಚಿಸಲಾಗಿದೆ.
ಪ್ರಸ್ತುತ 154 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 4,358 ಮಂದಿ ಮನೆಯಲ್ಲೇ ಪ್ರತ್ಯೇಕವಾಗಿದ್ದಾರೆ. ಭಾನುವಾರ ದೆಹಲಿಯಲ್ಲಿ 1,485 ಹೊಸ ಪ್ರಕರಣಗಳು ವರದಿಯಾಗಿದೆ. ಇದುವರೆಗೆ 18,84,560 ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ 26,175 ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 5,997ಕ್ಕೆ ಏರಿಕೆಯಾಗಿದೆ.