ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 14 ರನ್ ಗಳಿಂದ ಆರ್ ಸಿಬಿ ಸೋಲಿಸಿದೆ. ಇದರೊಂದಿಗೆ ಎರಡನೇ ಕ್ವಾಲಿಫೈಯರ್ ಗೆ ಲಗ್ಗೆ ಇಟ್ಟಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ಶುಕ್ರವಾರ ಅಹಮದಾಬಾದ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಸೆಣಸಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ, ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು. ನಾಯಕ ಫಾಪ್ ಡು ಪ್ಲೆಸಿಸ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಎದುರಾದರೂ ನಂತರ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟಿದಾರ್ ತಂಡಕ್ಕೆ ಭದ್ರ ಅಡಿಪಾಯ ಹಾಕಿದರು.
ವಿರಾಟ್ ಕೊಹ್ಲಿ 25 ರನ್ ಗಳಿಸಿ ಔಟಾದ ನಂತರ ಗ್ಲೆನ್ ಮ್ಯಾಕ್ಸ್ ವೆಲ್ 9, ಮಹಿಪಾಲ್ ಲೊಮ್ರೊರ್ 14 ರನ್ ಗಳಿಸಿ ಫೆವಿಲಿಯನ್ ಗೆ ನಿರ್ಗಮಿಸಿದರು. ನಂತರ ಜೊತೆಯಾದ ದಿನೇಶ್ ಕಾರ್ತಿಕ್, ರಜತ್ ಗೆ ಉತ್ತಮ ಸಾಥ್ ನೀಡಿದರು. 23 ಎಸೆತಗಳಲ್ಲಿ 37 ರನ್ ಗಳಿಸಿ, ನಾಟ್ ಔಟ್ ಆಗುವುದರೊಂದಿಗೆ ತಂಡ 200ರ ಗಡಿ ದಾಟಲು ನೆರವಾದರು. ರಜತ್ ಪಾಟಿದಾರ್ 54 ಎಸೆತಗಳಲ್ಲಿ 112 ರನ್ ಬಾರಿಸಿದರು.
ಆರ್ ಸಿಬಿ ನೀಡಿದ 208 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ಕೆ.ಎಲ್. ರಾಹುಲ್ 79, ದೀಪಕ್ ಹೂಡಾ 45, ಮನನ್ ವೂಹ್ರಾ 19 ರನ್ ಗಳಿಸುವುದರೊಂದಿಗೆ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಆರ್ ಸಿಬಿ 14 ರನ್ ಗಳಿಂದ ಗೆಲುವಿನ ನಗೆ ಬೀರಿತು.
ಆರ್ ಸಿಬಿ ಪರ ಜೋಶ್ ಹೇಜಲ್ ವುಡ್ ಮೂರು ವಿಕೆಟ್ ಪಡೆಯುವ ಮೂಲಕ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದರು. ಉಳಿದಂತೆ ಹರ್ಷಲ್ ಪಟೇಲ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
https://t.co/4lYt33YiD8
— CricBouncer (@Cricket_Bouncer) May 25, 2022
RCB has booked the Royal Clash against Rajasthan Royals in the 2nd Qualifier.#RCB#RCBvLSG#IPL2022#Eliminator