ಮುಂಬೈ: 2022ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 52 ರನ್ ಗಳಿಗೆ ಸೋಲು ಕಂಡಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಪೇರಿಸಿತ್ತು.
ಕೆಕೆಆರ್ ನೀಡಿದ 166 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಪ್ಯಾಟ್ ಕಮಿನ್ಸ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ್ದು 113 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಮುಂಬೈ ತಂಡ ಟೂರ್ನಿಯಲ್ಲಿ 11 ಪಂದ್ಯಗಳನ್ನು ಆಡಿದ್ದ 9 ಪಂದ್ಯಗಳಲ್ಲಿ ಸೋಲು ಕಂಡಿದೆ.
ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್ 43, ನಿತೀಶ್ ಕುಮಾರ್ 43 ರಿಂಕು ಸಿಂಗ್ 23 ರನ್ ಗಳಿಸಿದ್ದಾರೆ.
ಮುಂಬೈ ಪರ ಬ್ಯಾಟಿಂಗ್ ನಲ್ಲಿ ಇಶಾನ್ ಕಿಶನ್ 51, ಟಿಮ್ ಡೇವಿಡ್ 13, ಪೋಲಾರ್ಡ್ 15 ರನ್ ಬಾರಿಸಿದ್ದಾರೆ.