ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಐದು ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಸೋಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಸನ್ ರೈಸರ್ಸ್ ಪರ ಅಭಿಷೇಕ್ ಶರ್ಮಾ 43, ರೊಮಾರಿಯೋ ಶೆಫರ್ಡ್ 26, ವಾಷಿಂಗ್ಟನ್ ಸುಂದರ್ 25 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಹರ್ಪೀತ್ ಕೌರ್ ಹಾಗೂ ನೇಥನ್ ಎಲ್ಲಿಸ್ ತಲಾ 3 ವಿಕೆಟ್ ಪಡೆದರೆ, ಕಗಿಸೋ ರಬಾಡ 1 ವಿಕೆಟ್ ಗಳಿಸಿದರು.
ಸನ್ ರೈಸರ್ಸ್ ನೀಡಿದ 158 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಪಂಜಾಬ್ ಕಿಂಗ್ಸ್ ತಂಡ 15.1 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ್ ಗಳಿಸುವಲ್ಲಿ ಸಫಲವಾಯಿತು. ಪಂಜಾಬ್ ಕಿಂಗ್ಸ್ ಪರ ಲಿಯಾಮ್ ಲಿವಿಂಗ್ಸೋನ್ 49, ಶಿಖರ್ ಧವನ್ 39, ಜಾನಿ ಬೇರ್ಸೋವ್ 23 ರನ್ ಗಳಿಸುವುದರೊಂದಿಗೆ ತಂಡ ಗೆಲುವು ಸಾಧಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು.