ದೇವಮಾಲಿ, ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರರಾಜ್ಯ ಗಡಿ ವಿವಾದವು 2023 ರ ಮೊದಲೇ ಬಗೆಹರಿಯುವ ನಿರೀಕ್ಷೆ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ದೇವಮಾಲಿ, ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ನಡುವಿನ ಅಂತರರಾಜ್ಯ ಗಡಿ ವಿವಾದವು 2023 ರ ಮೊದಲೇ ಬಗೆಹರಿಯುವ ನಿರೀಕ್ಷೆ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.
ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯ ನರೋತ್ತಮ್ ನಗರದಲ್ಲಿರುವ ರಾಮಕೃಷ್ಣ ಮಿಷನ್ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, 'ಅಸ್ಸಾಂ ಮತ್ತು ಮೇಘಾಲಯ ನಡುವಿನ ಅಂತರರಾಜ್ಯ ಗಡಿ ವಿವಾದವನ್ನು ಶೇ 60 ರಷ್ಟು ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ.
'ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆಗೆ ಮತ್ತು ಅಭಿವೃದ್ಧಿಗೆ ಕೇಂದ್ರವು ಬದ್ಧವಾಗಿದೆ. ಇಲ್ಲಿನ ಯುವಕರು ಇನ್ನು ಮುಂದೆ ಬಂದೂಕು ಮತ್ತು ಪೆಟ್ರೋಲ್ ಬಾಂಬ್‌ಗಳಿಂದ ದೂರವಿರಲಿದ್ದಾರೆ. ಅವರು ಈಗ ಲ್ಯಾಪ್‌ಟಾಪ್‌ಗಳನ್ನು ಹೊತ್ತುಕೊಂಡು ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸುತ್ತಿದ್ದಾರೆ. ಈ ಪ್ರದೇಶಕ್ಕೆ ಕೇಂದ್ರವು ಅಭಿವೃದ್ಧಿಯ ಹಾದಿಯನ್ನು ಕಲ್ಪಿಸಿದೆ. ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಈ ಪ್ರದೇಶದಿಂದ 9,000 ಉಗ್ರಗಾಮಿಗಳು ಶರಣಾಗಿದ್ದಾರೆ' ಎಂದು ಶಾ ಹೇಳಿದರು.