HEALTH TIPS

2024ರ ಚುನಾವಣೆಗೆ ಮೂರು ತಂಡಗಳನ್ನು ರಚಿಸಿದ ಸೋನಿಯಾ ಗಾಂಧಿ

               ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನ ಭವಿಷ್ಯದ ಹಾದಿಯನ್ನು ರೂಪಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಮೂರು ತಂಡಗಳನ್ನು ರಚಿಸಿದ್ದಾರೆ. ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನಕ್ಕಾಗಿ ರಾಜಕೀಯ ವ್ಯವಹಾರಗಳ ಸಮಿತಿ, ಉದಯಪುರದ 'ನವ್ ಸಂಕಲ್ಪ್' ಘೋಷಣೆಯನ್ನು ಜಾರಿಗೆ ತರಲು ಟಾಸ್ಕ್ ಫೋರ್ಸ್-2024 ಮತ್ತು ಅಕ್ಟೋಬರ್‌ನಲ್ಲಿ ಆಯೋಜಿಸಿರುವ 'ಭಾರತ್ ಜೋಡೋ ಯಾತ್ರೆ'ಯ ನಿರ್ವಹಣೆಗೆ ಮತ್ತೊಂದು ತಂಡ ರಚಿಸಲಾಗಿದೆ.

             ರಾಹುಲ್ ಗಾಂಧಿ ಮತ್ತು ಜಿ-23 ಭಿನ್ನಮತೀಯ ಗುಂಪಿನ ಇಬ್ಬರು ಪ್ರಮುಖ ಸದಸ್ಯರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರು ರಾಜಕೀಯ ವ್ಯವಹಾರಗಳ ಸಮಿತಿಯ ಭಾಗವಾಗಿದ್ದರೆ, ಹಿರಿಯ ನಾಯಕರಾದ ಪಿ ಚಿದಂಬರಂ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಟಾಸ್ಕ್ ಫೋರ್ಸ್-2024ನ  ಸದಸ್ಯರಾಗಿದ್ದಾರೆ.

              ಗಾಂಧಿ ಜಯಂತಿಯಂದು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 'ಭಾರತ್ ಜೋಡೋ ಯಾತ್ರೆ'ಯನ್ನು ಸಂಘಟಿಸಲು ಸೋನಿಯಾ ಗಾಂಧಿ ಮತ್ತೊಂದು ತಂಡವನ್ನು ರಚಿಸಿದ್ದಾರೆ.

              ಉದಯಪುರದ 'ನವ್ ಸಂಕಲ್ಪ್' ಘೋಷಣೆಯನ್ನು ಜಾರಿಗೆ ತರಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಅಧ್ಯಕ್ಷತೆಯಲ್ಲಿಯೇ ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿದ್ದು, ಇದರಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಅಂಬಿಕಾ ಸೋನಿ, ದಿಗ್ವಿಜಯ್ ಸಿಂಗ್, ಕೆಸಿ ವೇಣುಗೋಪಾಲ್ ಹಾಗೂ ಜಿತೇಂದ್ರ ಸಿಂಗ್ ಸೇರಿದಂತೆ ಹಲವು ನಾಯಕರು ಇದ್ದಾರೆ.

                  "ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರಿಗೆ ಸಂಘಟನೆ, ಸಂವಹನ ಮತ್ತು ಮಾಧ್ಯಮ, ಪ್ರಭಾವ, ಹಣಕಾಸು ಹಾಗೂ ಚುನಾವಣಾ ನಿರ್ವಹಣೆಗೆ ಸಂಬಂಧಿಸಿದ ನಿರ್ದಿಷ್ಟ ಕಾರ್ಯಗಳನ್ನು ನಿಯೋಜಿಸಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries