ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಹಿರಿಯ ಆಟಗಾರ ಶಿಖರ್ ಧವನ್ ಕಮ್ ಬ್ಯಾಕ್ ಮಾಡಿಲ್ಲ. ಆದರೆ ಹಾರ್ದಿಕ್ ಪಾಂಡ್ಯ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ. ಇನ್ನು ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾಗೆ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
ಯುವ ವೇಗಿ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನಪಡೆದಿದ್ದು, ಅರ್ಷ್‌ದೀಪ್ ಸಿಂಗ್ ಕೂಡ T20I ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಟಿ20 ಭಾರತ ತಂಡ
ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ , ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.
ಟೆಸ್ಟ್ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ