ಮುಂಬೈ: ಮಹಾರಾಷ್ಟ್ರದಲ್ಲಿ ಬಿಸಿಲ ಬೇಗೆಯು ಕಳೆದ ಮಾರ್ಚ್ ನಿಂದ ಇಲ್ಲಿಯವರೆಗೆ ಕನಿಷ್ಟ ೨೫ ಮಂದಿಯ ಜೀವ ಬಲಿತೆಗೆದುಕೊಂಡಿದೆ. ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚು ಸಾವಾಗಿದೆ.
ಮಹಾರಾಷ್ಟ್ರದಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ಮಾರ್ಚ್ ನಿಂದ ಇದುವರೆಗೆ ಬಿಸಿಲಿನ ತಾಪಕ್ಕೆ 25 ಮಂದಿ ಮೃತಪಟ್ಟಿದ್ದಾರೆ ಇದು 2016 ರಿಂದ ಇದುವರೆಗೆ ವರದಿಯಾದ ಅತಿ ಹೆಚ್ಚು ಸಾವಾಗಿದೆ.
ಭಾರತದಲ್ಲಿ ಕಳೆದ ಏಪ್ರಿಲ್ ತಿಂಗಳಲ್ಲಿ ೧೨೨ ವರ್ಷಗಳ ಬಳಿಕ ಅಧಿಕ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಶುಕ್ರವಾರದವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಬಿಹಾರ, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಹೇಳಿದೆ.