ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು ಭಾನುವಾರ ರಾತ್ರಿ ಪುಲ್ವಾಮಾದ ಗುಂಡಿಪೋರಾದಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಎನ್ಕೌಂಟರ್ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಎರಡು ಎಕೆ ರೈಫಲ್ಗಳು ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದರು.
ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಭಾನುವಾರ ರಾತ್ರಿ 'ಕಾನ್ಸ್ಟೇಬಲ್ ರೆಯಾಜ್ ಅಹ್ಮದ್ನ ಹಂತಕ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಭದ್ರತಾ ಪಡೆಗಳಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ. ಮೇ 13ರಂದು ಪುಲ್ವಾಮಾದಲ್ಲಿ ಕಾನ್ಸ್ಟೆಬಲ್ ರನ್ನು ಹತ್ಯೆ ಮಾಡಿದ್ದರು.