ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 80 ಕ್ಷೇತ್ರಗಳ ಪೈಕಿ 75 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಗುರಿಯೊಂದಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿ ಎಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.

ವಿಧಾನಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಉತ್ತರ ಪ್ರದೇಶದಲ್ಲಿ ಆಯೋಜಿಸಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, '2024ರ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ಭೂಮಿಕೆ ಸಿದ್ಧಪಡಿಸಬೇಕಿದೆ' ಎಂದರು.
'ಜನರ ಸಹಕಾರ ಮತ್ತು ಕೋವಿಡ್ ಸಂಕಷ್ಟ ಸಮಯದ ನಮ್ಮ ಪರಿಶ್ರಮಕ್ಕೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಫಲ ದೊರೆತಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ 75 ಸ್ಥಾನಗಳ ಗುರಿ ಮುಟ್ಟಬೇಕು' ಎಂದರು.
ಯಶಸ್ವಿಯಾಗಿ ಎಂಟು ವರ್ಷ ಅಧಿಕಾರ ಪೂರೈಸಿರುವ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಯೋಗಿ ಆದಿತ್ಯನಾಥ್, '2024ರ ಚುನಾವಣೆಯಲ್ಲಿ ಗೆಲ್ಲಲು ನಾವು ಈಗಾಗಲೇ ಯೋಜನೆ ರೂಪಿಸಿದ್ದೇವೆ' ಎಂದು ತಿಳಿಸಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಅಪ್ನ ದಳ(ಎಸ್) ಮೈತ್ರಿಯೊಂದಿಗೆ ಬಿಜೆಪಿ ರಾಜ್ಯದಲ್ಲಿ 62 ಸ್ಥಾನಗಳನ್ನು ಗೆದ್ದಿತ್ತು