ನವದೆಹಲಿ: ಗ್ಯಾನ್ ವಾಪಿ ಮಸೀದಿ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಾರಣಾಸಿ ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದೆ.
ಪ್ರಕರಣದಲ್ಲಿನ ಸಂಕೀರ್ಣತೆಯನ್ನು ಮನಗಂಡು ಸರ್ವೋಚ್ಛ ನ್ಯಾಯಾಲಯ ಅನುಭವಿ ನ್ಯಾಯಾಧೀಶರಿಗೆ ವರ್ಗಾವಣೆ ಮಾಡುತ್ತಿರುವುದಾಗಿ ಹೇಳಿದೆ. ಉತ್ತರ ಪ್ರದೇಶ ಉನ್ನತ ನ್ಯಾಯಾಂಗ ಸೇವೆ ಹಿರಿಯ ಹಾಗೂ ಅನುಭವಿ ನ್ಯಾಯಾಂಗದ ಅಧಿಕಾರಿ ಪ್ರಕರಣವನ್ನು ಪರಿಶೀಲಿಸಲಿದ್ದಾರೆ.
ನ್ಯಾ. ಡಿ.ವೈ ಚಂದ್ರಚೂಡ್, ನ್ಯಾ. ಸೂರ್ಯಕಾಂತ್ ಹಾಗೂ ಪಿ.ಎಸ್ ನರಸಿಂಹ ಅವರು ಈ ಆದೇಶ ನೀಡಿದ್ದು ಮಸೀದಿಯ ಸಮಿತಿ ಅರ್ಜಿಯ ವಿಚಾರಣೆ ನಡೆಯುವವರೆಗೆ ಮೇ.17 ರಂದು ನೀಡಿದ್ದ ಮಧ್ಯಂತರ ಆದೇಶವೇ ಮುಂದುವರೆಯಲಿದೆ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.