ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ (PM CARES for children scheme)ನ್ನು ಬಿಡುಗಡೆ ಮಾಡಿದರು.
ಶಾಲೆಗೆ ಹೋಗುವ ಮಕ್ಕಳಿಗೆ ಪ್ರಧಾನ ಮಂತ್ರಿ ಮೋದಿ ವಿದ್ಯಾರ್ಥಿವೇತನವನ್ನು ವರ್ಗಾಯಿಸಿದರು. ಮಕ್ಕಳಿಗಾಗಿ PM CARES ನ ಪಾಸ್‌ಬುಕ್ ಮತ್ತು ಆಯುಷ್ಮಾನ್ ಭಾರತ್ - ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡ್ ನ್ನು ಕಾರ್ಯಕ್ರಮದ ಸಮಯದಲ್ಲಿ ಮಕ್ಕಳಿಗೆ ಹಸ್ತಾಂತರಿಸಲಾಯಿತು.
ನಂತರ ಮಾತನಾಡಿದ ಪ್ರಧಾನಿ, ಈ ಯೋಜನೆಯಡಿ ಯಾರಾದರೂ ವೃತ್ತಿಪರ ಕೋರ್ಸ್‌ಗಳಿಗೆ, ಉನ್ನತ ಶಿಕ್ಷಣಕ್ಕಾಗಿ ಶಿಕ್ಷಣ ಸಾಲದ ಅಗತ್ಯವಿದ್ದರೆ, PM-CARES ಸಹಾಯ ಮಾಡುತ್ತದೆ. ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ಅವರ ದೈನಂದಿನ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದರು.
‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಮೂಲಕ ಮಕ್ಕಳಿಗೆ ಆಯುಷ್ಮಾನ್ ಹೆಲ್ತ್ ಕಾರ್ಡ್ ನೀಡಲಾಗುತ್ತಿದ್ದು, ಈ ಮೂಲಕ 5 ಲಕ್ಷದವರೆಗಿನ ಉಚಿತ ಚಿಕಿತ್ಸೆ ಸೌಲಭ್ಯವೂ ಲಭ್ಯವಾಗಲಿದೆ.
PM CARES FUND: ಪಿಎಂ ಕೇರ್ಸ್ ನಿಧಿಯು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಆಸ್ಪತ್ರೆಗಳನ್ನು ಸಿದ್ದಗೊಳಿಸಲು, ವೆಂಟಿಲೇಟರ್‌ಗಳನ್ನು ಖರೀದಿಸಲು ಮತ್ತು ಆಮ್ಲಜನಕ ಘಟಕಗಳನ್ನು ಸ್ಥಾಪಿಸಲು ಸಾಕಷ್ಟು ಸಹಾಯ ಮಾಡಿದೆ. ಇದರಿಂದಾಗಿ ಅನೇಕ ಜೀವಗಳನ್ನು ಉಳಿಸಲಾಗಿದೆ. ನಮ್ಮನ್ನು ಅಕಾಲಿಕವಾಗಿ ತೊರೆದವರ ಮಕ್ಕಳಿಗಾಗಿ, ನಿಮ್ಮೆಲ್ಲರ ಭವಿಷ್ಯಕ್ಕಾಗಿ ಈ ನಿಧಿಯನ್ನು ಬಳಸಲಾಗುತ್ತಿದೆ ಎಂದರು.
ಮಾರ್ಚ್ 11, 2020ರಿಂದ ಕಳೆದ 2022ರ ಫೆಬ್ರವರಿ 28ರ ನಡುವಿನ ಅವಧಿಯಲ್ಲಿ COVID-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರು, ಕಾನೂನುಬದ್ಧ ಪಾಲಕರು ಅಥವಾ ದತ್ತು ಪಡೆದ ಪೋಷಕರು ಅಥವಾ ಬದುಕುಳಿದಿರುವ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಅಧ್ಯಯನ, ಜೀವನಕ್ಕಾಗಿ ಪ್ರಧಾನ ಮಂತ್ರಿಯವರು ಮೇ 29, 2021 ರಂದು ಮಕ್ಕಳಿಗಾಗಿ PM ಕೇರ್ಸ್ ಯೋಜನೆಯನ್ನು ಪ್ರಾರಂಭಿಸಿದರು.
ಈ ಯೋಜನೆಯ ಉದ್ದೇಶವು ಮಕ್ಕಳಿಗೆ ವಸತಿ ಒದಗಿಸುವ ಮೂಲಕ ನಿರಂತರವಾದ ರೀತಿಯಲ್ಲಿ ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆ ನೀಡುವುದು, ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವುದಾಗಿದೆ. 23 ವರ್ಷಗಳನ್ನು ತಲುಪಿದ ನಂತರ 10 ಲಕ್ಷ ರೂಪಾಯಿ ಆರ್ಥಿಕ ಬೆಂಬಲದೊಂದಿಗೆ ಸ್ವಾವಲಂಬಿ ಅಸ್ತಿತ್ವಕ್ಕೆ ಅವರನ್ನು ಸಜ್ಜುಗೊಳಿಸುವುದು. ವಯಸ್ಸು ಮತ್ತು ಆರೋಗ್ಯ ವಿಮೆಯ ಮೂಲಕ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದಾಗಿದೆ.
ಈ ಯೋಜನೆಗೆ ಅರ್ಹ ಮಕ್ಕಳನ್ನು ನೋಂದಾಯಿಸಲು ಸರ್ಕಾರವು ಆನ್‌ಲೈನ್ ಪೋರ್ಟಲ್ ನ್ನು ಪ್ರಾರಂಭಿಸಿದೆ. ಪೋರ್ಟಲ್ ಏಕ-ಗವಾಕ್ಷಿ ವ್ಯವಸ್ಥೆಯಾಗಿದ್ದು, ಇದು ಮಕ್ಕಳ ಅನುಮೋದನೆ ಪ್ರಕ್ರಿಯೆ ಮತ್ತು ಎಲ್ಲಾ ಇತರ ಸಹಾಯವನ್ನು ಸುಗಮಗೊಳಿಸುತ್ತದೆ.