ಪಾಲಕ್ಕಾಡ್: ಪಾಲಕ್ಕಾಡ್ ನ ಆರ್‍ಎಸ್‍ಎಸ್ ಮಾಜೀ ಶಾರೀರಿಕ್ ಪ್ರಮುಖ್ ಶ್ರೀನಿವಾಸ್ ಅವರ ಹತ್ಯೆಗೆ ಸಂಬಂಧಿಸಿದಂತೆ ಅಗ್ನಿಶಾಮಕ ದಳದ ಅಧಿಕಾರಿಯನ್ನು ಬಂಧಿಸಲಾಗಿದೆ. ಕೊಂಗಾಡ್ ಠಾಣೆಯ ಅಗ್ನಿಶಾಮಕ ಅಧಿಕಾರಿ ಜಿಶಾದ್ ಬಂಧಿತ ಆರೋಪಿ.
ಆರ್‍ಎಸ್‍ಎಸ್ ಕಾರ್ಯಕರ್ತನ ಹತ್ಯೆಯ ಸಂಚಿನಲ್ಲಿ ಜಿಶಾದ್ ಭಾಗಿಯಾಗಿರುವುದನ್ನು ತನಿಖಾ ತಂಡ ಪತ್ತೆ ಮಾಡಿದೆ. ಈತ ಆರೋಪಿಗಳಿಗೆ ವಿವಿಧ ಸಂದರ್ಭಗಳಲ್ಲಿ ನೆರವು ನೀಡಿರುವುದು ಪತ್ತೆಯಾಗಿದೆ.
ಜುಬೇರ್ ಹತ್ಯೆಗೆ ಪ್ರತೀಕಾರವಾಗಿ ಕೊಲ್ಲಬೇಕಾದವರ ಪಟ್ಟಿ ಸಿದ್ಧಪಡಿಸಿದ ಗುಂಪಿನಲ್ಲಿ ಜಿಶಾದ್ ಕೂಡ ಒಬ್ಬನಾಗಿದ್ದ. ಕೊಡುವೂರಿನವನಾದ ಜಿಶಾದ್ 2017 ರಿಂದ ಅಗ್ನಿಶಾಮಕ ದಳದಲ್ಲಿ ಕೆಲಸ ಮಾಡುತ್ತಿದ್ದಾನೆ.
ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ಕೊಲೆಯಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ. ಇತರೆ ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಬೇರೆ ರಾಜ್ಯಗಳಿಗೂ ವಿಸ್ತರಿಸಲಾಗಿದೆ. ಆರೋಪಿಗಳು ಗಡಿ ದಾಟಲು ಸಹಾಯ ಮಾಡಲು ಜಿಶಾದ್ ತನ್ನ ಅಧಿಕಾರವನ್ನು ದುರುಪಯೋಗಪಡಿಸಿದ್ದಾನೆ ಎಂದು ಪೋಲೀಸರು ಶಂಕಿಸಿದ್ದಾರೆ.