ನವದೆಹಲಿ: ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವ ಬಗ್ಗೆ ಭಾರತ ಸರ್ಕಾರ ಗುರುವಾರ ಅಧಿಕೃತ ಪ್ರತಿಕ್ರಿಯೆ ನೀಡಿದೆ.
ನವದೆಹಲಿ: ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವ ಬಗ್ಗೆ ಭಾರತ ಸರ್ಕಾರ ಗುರುವಾರ ಅಧಿಕೃತ ಪ್ರತಿಕ್ರಿಯೆ ನೀಡಿದೆ.
'ಸೇತುವೆಯ ಕುರಿತ ವರದಿಗಳನ್ನು ನಾವು ಗಮನಿಸಿದ್ದೇವೆ.
ಚೀನಾ ಸೇನೆ ಮತ್ತು ಶಸ್ತ್ರಸಜ್ಜಿತ ವಾಹನಗಳ ಸುಗಮ ಸಂಚಾರಕ್ಕಾಗಿ ಪಾಂಗಾಂಗ್ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವುದನ್ನು ಉಪಗ್ರಹ ಚಿತ್ರಗಳು ಬಹಿರಂಗಪಡಿಸಿವೆ.
ಈ ಪ್ರದೇಶದಲ್ಲಿ ಒಂದು ತಿಂಗಳ ಹಿಂದೆ ಸಣ್ಣ ಸೇತುವೆಯನ್ನು ನಿರ್ಮಿಸಲಾಗಿತ್ತು.
ಹೊಸ ಸೇತುವೆಯು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಪಿಎಲ್‌ಎ ಪಡೆಗಳ ಪ್ರಧಾನ ಕೇಂದ್ರವಾದ ಖುರ್ನಾಕ್ ಫೋರ್ಟ್ ಮತ್ತು ರುಟೋಗ್ ನಡುವೆ 180 ಕಿ.ಮೀ. ಅಂತರವನ್ನು ಕಡಿಮೆ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.