ತಿರುವನಂತಪುರ: ಸರ್ಕಾರ ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಎರಡನೇ ವರ್ಷಕ್ಕೆ ಕಾಲಿಡುತ್ತಿದ್ದು, ಜನರ ಬೆಂಬಲ ಹೆಚ್ಚಿದೆ ಎಂದು ಮುಖ್ಯಮಂ ತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಜನಬೆಂಬಲ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬೊಟ್ಟುಮಾಡಿರುವರು.
ಯಾವುದೇ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಲು ಎಲ್ಡಿಎಫ್ ತನ್ನ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿರುವರು.
ಕೇರಳದಲ್ಲಿ ಯುವ ಪೀಳಿಗೆ ಬಯಸುವ ಆಧುನಿಕ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮಹತ್ತರವಾದ ಪ್ರಯತ್ನಗಳನ್ನು ಮಾಡಲಾಗಿದೆ. 100 ದಿನಗಳ ಕ್ರಿಯಾ ಯೋಜನೆಯು ಪ್ರಣಾಳಿಕೆಯಲ್ಲಿನ ಭರವಸೆಗಳ ಅನುಷ್ಠಾನ ಮತ್ತು ಅನುಷ್ಠಾನಗೊಳ್ಳಬೇಕಾದ ಕೆಲವು ಕ್ಷೇತ್ರಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು.