ನವದೆಹಲಿ: ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೂ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ತುಂಬಾ ಕಡಿಮೆ ಇದೆ. ಸದ್ಯ ಕೋವಿಡ್ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬುಧವಾರ ಹೇಳಿದರು.
ನವದೆಹಲಿ: ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೂ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ತುಂಬಾ ಕಡಿಮೆ ಇದೆ. ಸದ್ಯ ಕೋವಿಡ್ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಬುಧವಾರ ಹೇಳಿದರು.
ಕೋವಿಡ್ ಪರಿಸ್ಥಿತಿ ಮೇಲೆ ಸರ್ಕಾರ ನಿಗಾ ವಹಿಸಿದೆ. ಪ್ರಸ್ತುತದ ಸ್ಥಿತಿ ಗಮನಿಸಿದರೆ ಕಠಿಣ ನಿರ್ಬಂಧಗಳನ್ನು ಹೇರುವ ಅಗತ್ಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಕೋವಿಡ್ ರೋಗಿಗಳ ಚಿಕಿತ್ಸೆಗೆ 10,000 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 200 ಹಾಸಿಗೆ ಮಾತ್ರ ಭರ್ತಿಯಾಗಿದೆ. ಇದು ಕೋವಿಡ್ ನಿಯಂತ್ರಣದಲ್ಲಿದೆ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಹೇಳಿದರು.
ದೆಹಲಿ ಸರ್ಕಾರ ಕೋವಿಡ್ ಪತ್ತೆ ಪರೀಕ್ಷೆಯನ್ನು ಹೆಚ್ಚಳ ಮಾಡಿದೆ. ಪ್ರತಿನಿತ್ಯ ಸರಾಸರಿ 1,200- 1,500 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಸೋಂಕು ದೃಢ ಪ್ರಮಾಣ ಶೇ 5-6 ರಷ್ಟಿದೆ. ಮಂಗಳವಾರ 1,414 ಹೊಸ ಪ್ರಕರಣಗಳು ವರದಿಯಾಗಿವೆ. ದೆಹಲಿಯ ಒಟ್ಟು ಸೋಂಕಿತರ ಸಂಖ್ಯೆ 18,87,050ಕ್ಕೆ ಏರಿಕೆಯಾಗಿದ್ದು, ಇದುವರೆಗೆ 26,176 ಸೋಂಕಿತರು ಮೃತಪಟ್ಟಿದ್ದಾರೆ.