ಭೋಪಾಲ್: ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್‌ಸಿಎಂ) ಶನಿವಾರ ತಿಳಿಸಿದೆ.
ಭೋಪಾಲ್: ದೇಶದಲ್ಲಿ ತ್ರಿವಳಿ ತಲಾಖ್ ಪ್ರಕರಣಗಳು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್‌ಸಿಎಂ) ಶನಿವಾರ ತಿಳಿಸಿದೆ.
ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಎನ್‌ಸಿಎಂ ಸದಸ್ಯೆ ಸೈಯದ್ ಶಹಝಾದಿ ಅವರು,' ನಾನು ತ್ರಿವಳಿ ತಲಾಖ್ ಮತ್ತು ಇತರೆ ಸಮಸ್ಯೆಗಳ ಬಗ್ಗೆ ಮುಸ್ಲಿಂ ಮಹಿಳೆಯರೊಂದಿಗೆ ಮಾತುಕತೆ ನಡೆಸಿದ್ದೇನೆ.
ಎರಡು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯರ (ವೈವಾಹಿಕ ಹಕ್ಕುಗಳ ರಕ್ಷಣೆ) ಕಾಯ್ದೆ 2019ರಡಿ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಂಕಿತ ಹಾಕಿದ್ದರು. ಈ ಕಾನೂನಿನಡಿ ತ್ರಿವಳಿ ತಲಾಖ್ ಅಥವಾ ತಲಾಖ್-ಇ-ಬಿದ್ದತ್ ಆಚರಣೆಯನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗಿದ್ದು, ಕಾನೂನು ಉಲ್ಲಂಘಿಸಿದವರು ಮೂರು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೂ ಗುರಿಯಾಗಬಹುದು.