ಕೊಲ್ಕತ್ತಾ: ಕೋವಿಡ್ ಕಡಿಮೆಯಾದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಂಗಾಳದಲ್ಲಿ ಹೇಳಿರುವುದಾಗಿ ndtv.com ವರದಿ ಮಾಡಿದೆ. ಆ ಮೂಲಕ ವಿವಾದಾತ್ಮಕ ಪೌರತ್ವ ಕಾನೂನು ಕೇಂದ್ರದ ಕಾರ್ಯಸೂಚಿಗೆ ಮರಳಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪೌರತ್ವ ಕಾನೂನನ್ನು ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
"ನಾನು ಇಂದು ಉತ್ತರ ಬಂಗಾಳಕ್ಕೆ ಬಂದಿದ್ದೇನೆ. ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಕೋವಿಡ್ ಅಲೆ ಕಡಿಮೆಯಾದ ತಕ್ಷಣ ನಾವು ಸಿಎಎ ಅನ್ನು ಜಾರಿಗೊಳಿಸುತ್ತೇವೆ ಎಂದು ನಾನು ಹೇಳಲು ಬಯಸುತ್ತೇನೆ' ಎಂದು ಅಮಿತ್ ಶಾ ಹೇಳಿದ್ದಾರೆ.