ರಾಯ್‌ಪುರ: ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಇಂದು ರಾತ್ರಿ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳನ್ನು ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಅವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಪರೀಕ್ಷಾರ್ಥ ಹಾರಾಟದ ವೇಳೆ ಸಂಭವಿಸಿದ ಅಪಘಾತದಲ್ಲಿ ಹೆಲಿಕಾಪ್ಟರ್ ಸಂಪೂರ್ಣ ನಾಶವಾಗಿದೆ.
ಹೆಲಿಕಾಪ್ಟರ್ ಪತನ ಗುರಿತಂತೆ ಟ್ವೀಟ್ ಮಾಡಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಯ್‌ಪುರದ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವುದು ದುಃಖದ ಸುದ್ದಿ. ಈ ದುರಂತ ಅಪಘಾತದಲ್ಲಿ ನಮ್ಮ ಪೈಲಟ್‌ಗಳಾದ ಕ್ಯಾಪ್ಟನ್ ಪಾಂಡಾ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬ ಸದಸ್ಯರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಎಂದು ಭೂಪೇಶ್ ಬಘೇಲ ಅವರು ಟ್ವೀಟ್ ಮಾಡಿದ್ದಾರೆ.