ನವದೆಹಲಿ: ಗೆಜೆಟೆಡ್ ಅಲ್ಲದ ಹುದ್ದೆಗಳಿಗೆ ಭರ್ತಿ ಮಾಡಲು ಈ ವರ್ಷದಿಂದಲೇ ಆನ್‌ಲೈನ್ ಮೂಲಕ ಸಾಮಾನ್ಯ ಅರ್ಹತಾ ಪರೀಕ್ಷೆ (ಸಿಇಟಿ) ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.

ಇಲ್ಲಿನ ನಾರ್ತ್ ಬ್ಲಾಕ್‌ನಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಅಡಿಯಲ್ಲಿನ ಎಲ್ಲ ಆರು ಸ್ವಾಯತ್ತ ಸಂಸ್ಥೆಗಳ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಸಿಬ್ಬಂದಿ ಖಾತೆಯ ರಾಜ್ಯ ಸಚಿವರೂ ಆಗಿರುವ ಜಿತೇಂದ್ರ ಸಿಂಗ್ ಈ ವಿಷಯ ತಿಳಿಸಿದರು.